ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಗಿದೆ: ಇಮ್ತಿಯಾಝ್

Update: 2023-07-07 15:59 GMT

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಗಿದೆ .ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಯಾವುದೇ ಘೋಷಣೆಗಳಿಲ್ಲ, ಅತಿಥಿ ಶಿಕ್ಷಕರ, ಉಪನ್ಯಾಸಕರ ಖಾಯಮಾತಿಗೆ ಯಾವುದೇ ಚಕಾರ ಎತ್ತದ ಬಜೆಟ್ ಮಂಡಿಸಿದ್ದಾರೆ ಎಂದು ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ತಿಳಿಸಿದ್ದಾರೆ.

ಬಿಬಿಎಂಪಿ ಚುನಾವಣೆಯ ದೃಷ್ಟಿಕೋನದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೊಟ್ಟು ಇತರ ನಗರದ ಜನರಿಗೆ ಅನ್ಯಾಯ ಮಾಡಲಾಗಿದೆ .

ಹೊಸ ಶಿಕ್ಷಣ ನೀತಿಯನ್ನು ರದ್ದುಗೊಳಿಸಿರುವುದು ಮತ್ತು ಕೇಂದ್ರ ರದ್ದುಪಡಿಸಿದ್ದ ಎಪಿಎಂಸಿ ಕಾಯ್ದೆಯನ್ನು ವಾಪಸ್ ಜಾರಿಗೊಳಿಸುತ್ತಿರುವುದು ಸ್ವಾಗ ತಾರ್ಹ. ಆದರೆ ಐದು ಗ್ಯಾರೆಂಟಿಗಳಿಗೆ ಹಣ ಹೊಂದಿಸುವ ಭರದಲ್ಲಿ ಮತ್ತು ರಾಜಸ್ವ ಸಂಗ್ರಹದಲ್ಲಿ ಹೆಚ್ಚಳ ಮಾಡುವ ತರಾತುರಿಯಲ್ಲಿ ಅಬಕಾರಿ, ಸ್ಟ್ಯಾಂಪಿಗ್, ದ್ವಿಚಕ್ರ ಮತ್ತು ಇತರ ವಾಣಿಜ್ಯ ವಾಹನಗಳ ಮೇಲಿನ ತೆರಿಗೆ ಏರಿಕೆ ಮಾಡಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಬಜೆಟ್ ಮಂಡಿಸಿದ್ದಾರೆ ಎಂದು ಇಮ್ತಿಯಾಝ್‌ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News