ಬಂಟ್ವಾಳ : ಹಾಸಿಗೆ, ತಲೆದಿಂಬು ತಯಾರಿಕಾ ಫ್ಯಾಕ್ಟರಿಗೆ ಬೆಂಕಿ; ಅಪಾರ ನಷ್ಟ

Update: 2023-07-12 12:26 GMT

ಬಂಟ್ವಾಳ : ಹಾಸಿಗೆ ಹಾಗೂ ತಲೆದಿಂಬು ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಬುಧವಾರ ನಡೆದಿದೆ.

ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಈ ಫ್ಯಾಕ್ಟರಿಯೊಳಗೆ ಲಕ್ಷಾಂತರ ರೂ. ಮೌಲ್ಯದ ಮೆಷಿನರಿಗಳು, ತಲೆದಿಂಬು ಹಾಗೂ ಹಾಸಿಗೆಗಳು ದಸ್ತಾನು ಇರಿಸಲಾಗಿತ್ತು.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ನೀರು ಹಾಯಿಸುವ ಮೂಲಕ ಹೆಚ್ಚಿನ ಪ್ರಮಾಣದ ನಷ್ಟವನ್ನು ತಡೆಯಲಾಗಿದೆ. ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು , ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News