ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ; ಓರ್ವ ಸೆರೆ

Update: 2023-07-12 16:09 GMT

ಬೆಳ್ತಂಗಡಿ: ಬಜಿರೆ‌ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗ್ಡೆ ನೀಡಿದ ದೂರಿನಲ್ಲಿ ‌ಹರೀಶ್ ಪೂಜಾರಿ, ಡಾ.ರಾಜೇಶ್ , ರಮೇಶ್ ಕುಡ್ಮೇರು, ಓಂ ಪ್ರಕಾಶ್, ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.

ದೂರು  ಸ್ವೀಕರಿಸಿದ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಎಸ್.ಐ ಸೌಮ್ಯ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹರೀಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರೆ. ಘಟನೆಯಲ್ಲಿ ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News