ಜನಪರ, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಉತ್ತೇಜನೆ ನೀಡುವ ಬಜೆಟ್: ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್
Update: 2023-07-08 12:59 GMT
ಉಳ್ಳಾಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ಬಜೆಟ್ ಮಂಡಿಸಿದ್ದು ಅದರಲ್ಲೂ ಅಲ್ಪಸಂಖ್ಯಾತ ಸಮುದಾಯದವರ ಶಿಕ್ಷಣಕ್ಕೆ ಉತ್ತೇಜಿಸುವಂತೆ ಹಲವು ಯೋಜನೆಗಳು ಮಂಡಿಸಲಾಗಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 60 ಕೋಟಿ ಅನುದಾನ ಘೋಷಿಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ, ಸ್ನಾತಕೋತ್ತರ ವ್ಯಾಸಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ ಘೋಷಿಸಲಾಗಿದ್ದು ಅಲ್ಪಸಂಖ್ಯಾತ ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ ಎಂದು ಅವರು ಹೇಳಿದರು.