ರಾಜ್ಯದಲ್ಲಿ ಮುಂದುವರಿದ ಮಳೆ; ಕರಾವಳಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್'

Update: 2023-07-04 17:08 IST
ರಾಜ್ಯದಲ್ಲಿ ಮುಂದುವರಿದ ಮಳೆ; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
  • whatsapp icon

ಮಂಗಳೂರು, ಜು.4: ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 5ರ ಬೆಳಗ್ಗೆ 8.30ರಿಂದ ಜು. 6ರ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 8ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News