ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Update: 2023-07-15 14:35 GMT

ಕಾಪು, ಜು.15: ಉಡುಪಿ ಯಕ್ಷ ಶಿಕ್ಷಣ ಟ್ರಸ್ಟ್ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಉಳಿಯಾರಗೋಳಿ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಉದ್ಘಾಟಿಸಿದರು.

ಶಾಲಾ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಅವರ ವಾಕ್ ಚಾತುರ್ಯವನ್ನು ಹೆಚ್ಚಿಸಿಕೊಳ್ಳಲು ಜೊತೆಗೆ ಜ್ಞಾಪಕ ಶಕ್ತಿ ಯನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಒಂದು ಉತ್ತಮ ವೇದಿಕೆಯಾಗಿದೆ. ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ಈ ವರ್ಷದಿಂದ ಕಾಪು ವಿಧಾನಸಭಾ ಕ್ಷೇತ್ರದಾ ದ್ಯಂತ ಸುಮಾರು 15 ಶಾಲೆಗಳಲ್ಲಿ ಯಕ್ಷಗಾನ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದರು.

ಈ ಸಂದರ್ಭದಲ್ಲಿ ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ.ಕೆ. ಪ್ರಶಾಂತ್ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಉಪಾಧ್ಯಕ್ಷ ವಿ.ಜಿ ಶೆಟ್ಟಿ, ಯಕ್ಷ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಧುಕರ್, ಪ್ರಾಂಶುಪಾಲೆ ಮರೀನ ಸರೋಜ, ಮುಖ್ಯೋಪಾಧ್ಯಾಯಿನಿ ಚಿತ್ರಲೇಖ ಟಿ.ಶೆಟ್ಟಿ, ಯಕ್ಷಗಾನ ಗುರುಗಳಾದ ಮಂಜುನಾಥ್, ಶಿವಣ್ಣ ಬಾಯರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News