ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಲಭ್ಯ

Update: 2023-07-01 14:17 GMT

ಉಡುಪಿ, ಜು.1: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಡೋಸ್ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆ ಪಡೆದು 6 ತಿಂಗಳಾಗಿರುವ 18 ವರ್ಷ ಮೇಲ್ಪಟ್ಟವರಿಗೆ ಕೋರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಲಸಿಕೆಯು ಉಡುಪಿ, ಕಾರ್ಕಳ ಹಾಗೂ ಕುಂದಾಪುರ ತಾಲೂಕು ಆಸ್ಪತ್ರೆಗಳಲ್ಲಿ ತಲಾ 20-ಡೋಸ್‌ಗಳಂತೆ ಲಸಿಕೆ ಲಭ್ಯವಿರುತ್ತದೆ.

ಲಸಿಕೆ ಪಡೆಯಲು ತಾಲೂಕು ಆರೋಗ್ಯಾಧಿಕಾರಿ ಕಚೇರಿಗಳಾದ ಉಡುಪಿಯ ರಂಜಿತ್ ಮೊ.ನಂ: 8277506007, ಕುಂದಾಪುರದ ಪ್ರದೀಪ್ ಮೊ.ನಂ: 8277506008 ಹಾಗೂ ಕಾರ್ಕಳದ ಪ್ರಸನ್ನ ಮೊ.ನಂ: 9844875390 ಅವರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತ ಪಡಿಸಿಕೊಂಡು ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News