ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಕ್ಕೆ ಸಿಪಿಎಂ ಒತ್ತಾಯ
Update: 2023-06-30 16:05 GMT
ಮಂಗಳೂರು: ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಬೇಕು ಎಂದು ದ.ಕ.ಜಿಲ್ಲಾ ಸಿಪಿಎಂ ಆಗ್ರಹಿಸಿದೆ.
ಬಿಪಿಎಲ್ ಕಾರ್ಡ್‌ದಾರರಿಗೆ ನಿಗದಿಪಡಿಸಿದ ಖಾಸಗಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯಲು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಒಪ್ಪಿಗೆ ಪತ್ರ ಪಡೆಯಬೇಕಾಗಿದೆ. ಆದರೆ ಎಪಿಎಲ್ ಕಾರ್ಡ್‌ದಾರರಿಗೆ ಈ ಸೌಲಭ್ಯ ಇರುವುದಿಲ್ಲ. ಅವರು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆಗೆ ಲಕ್ಷಾಂತರ ಹಣ ವ್ಯಯ ಮಾಡಬೇಕಾಗಿದೆ. ಚಿಕಿತ್ಸೆಯ ವೆಚ್ಚ ಭರಿಸಲು ಸಾಧ್ಯವಾಗದವರು ಚಿಕಿತ್ಸೆಯಿಂದ ವಂಚಿತರಾಗಿ ಪ್ರಾಣ ಕಳಕೊಳ್ಳಬೇಕಾಗಿದೆ. ಹಾಗಾಗಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಬೇಕು ಸಿಪಿಎಂ ದ.ಕ.ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಒತ್ತಾಯಿಸಿದ್ದಾರೆ.