ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

Update: 2023-07-07 16:28 GMT

ಮಂಗಳೂರು,ಜು.7: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಸದ ವಿವರ:

ಜು.8ರ  ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10 ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ ನೀಡಿ ನಂತರ 11 ಗಂಟೆಗೆ ಉಜಿರೆಯ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾ ವಿದ್ಯಾಲಯದ 29ನೇ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2 ಗಂಟೆಗೆ ಬೆಳ್ತಂಗಡಿಯ ಪ್ರಸನ್ನ ಎಜುಕೇಶನ್ ಟ್ರಸ್ಟ್ ಗೆ ಭೇಟಿ ನೀಡಿ ನಂತರ 2.15ಕ್ಕೆ ಬೆಳ್ತಂಗಡಿ ತಾಲೂಕು ಮಟ್ಟದ ಪಕ್ಷದ ಕಾರ್ಯಕರ್ತ ರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 3.30ಕ್ಕೆ ಬೆಳ್ತಂಗಡಿಯ ಸಂಗಮ್ ಹಾಲ್‌ನಲ್ಲಿ ಜನತಾ ದರ್ಶನದಲ್ಲಿ ಭಾಗವಹಿಸುವರು. ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 10.45ಕ್ಕೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜು.8 ರಂದು ಉಸ್ತುವಾರಿ ಸಚಿವರ ಜನತಾ ದರ್ಶನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜು.8ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ತಾಲೂಕಿನ, ಲಾಯಿಲ ಗ್ರಾಮದ, ಜ್ಯೋತಿ ಆಸ್ಪತ್ರೆ ಮುಂಭಾಗ ಇರುವ ಸಂಗಮ ಸಭಾಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಕುಂದು ಕೊರತೆ, ಅಹವಾಲುಗಳನ್ನು ಸಲ್ಲಿಸುವಂತೆ ಹಾಗೂ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News