ದ.ಕ. ಎಡಿಸಿಯಾಗಿ ಡಾ.ಜಿ.ಸಂತೋಷ್ ಕುಮಾರ್ ನೇಮಕ
Update: 2023-07-07 17:58 GMT
ಮಂಗಳೂರು: ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ.
ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಎಚ್.ಕೃಷ್ಣಮೂರ್ತಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹುದ್ದೆ ಖಾಲಿಯಾಗಿತ್ತು.