ಗಣೇಶ್ ಚತುರ್ಥಿ: ಮುಂಬೈ ಲೋಕಮಾನ್ಯ ತಿಲಕ್ - ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ಸೇವೆ

Update: 2023-07-03 16:28 GMT

ಮಂಗಳೂರು, ಜು.3: ಗಣೇಶ್ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮುಂಬೈ ಲೋಕಮಾನ್ಯ ತಿಲಕ್ ಮತ್ತು ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ ಸೌಲಭ್ಯವನ್ನು ಕಲ್ಪಿಸಲಾಗಿದೆ.

ರೈಲು ಸಂಖ್ಯೆ.01165 ಮುಂಬೈ ಲೋಕಮಾನ್ಯ ತಿಲಕ್ - ಮಂಗಳೂರು ಜಂಕ್ಷನ್ ವಿಶೇಷ ಸೇವೆಯು ಮುಂಬೈ ಲೋಕಮಾನ್ಯ ತಿಲಕ್‌ನಿಂದ ರಾತ್ರಿ 10:15 ಗಂಟೆಗೆ ಹೊರಡಲಿದೆ. ಮರುದಿನ ಸಂಜೆ 5.20 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. (8 ಸೇವೆಗಳು)

ಸೆ. 15, 16, 17, 18, 22, 23, 29 ಮತ್ತು 30 ಸೆಪ್ಟೆಂಬರ್ 2023 ರಂದು ರಾತ್ರಿ ಮುಂಬೈನಿಂದ ರೈಲು ಹೊರಡಲಿದೆ.

ರೈಲು ಸಂಖ್ಯೆ.01166 ಮಂಗಳೂರು ಜಂಕ್ಷನ್ - ಮುಂಬೈ ಲೋಕಮಾನ್ಯ ತಿಲಕ್ ವಿಶೇಷ ಸೇವೆಯು ಮಂಗಳೂರು ಜಂಕ್ಷನ್‌ನಿಂದ ಸಂಜೆ 6:40 ಗಂಟೆಗೆ ಹೊರಡಲಿದೆ. ಮತ್ತು ಮುಂಬೈ ಲೋಕಮಾನ್ಯ ತಿಲಕ್ ಅನ್ನು ಮರುದಿನ ಮಧ್ಯಾಹ್ನ 1.35 ಗಂಟೆಗೆ ತಲುಪುತ್ತದೆ. ಸೆಪ್ಟೆಂಬರ್ 17, 18, 19, 20, 24 ಮತ್ತು 25, ಅಕ್ಟೋಬರ್ 1 ಮತ್ತು 2 ರಂದು (8 ಸೇವೆಗಳು)

*ನಿಲುಗಡೆ: ಥಾಣೆ, ಪನ್ವೇಲ್, ರೋಹಾ, ಮಂಗಾಂವ್, ಖೇಡ್, ಚಿಪ್ಲೂನ್, ಸವರ್ದಾ, ಸಂಗಮೇಶ್ವರ ರಸ್ತೆ, ರತ್ನಗಿರಿ, ಅಡವಳಿ, ರಾಜಾಪುರ ರಸ್ತೆ, ವೈಭವಾಡಿ ರಸ್ತೆ, ಕಂಕಾವಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಂ, ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ/ಬೈಂದೂರು, ಕುಂದಾಪುರ, ಉಡುಪಿ, ಮುಲ್ಕಿ ಮತ್ತು ಸುರತ್ಕಲ್.

*ಕೋಚ್ ಸಂಯೋಜನೆ:ಎಸಿ 2-ಟೈರ್ ಕೋಚ್ - 1, ಎಸಿ 3-ಟೈರ್ ಕೋಚ್‌ಗಳು-2, ಸ್ಲೀಪರ್ ಕ್ಲಾಸ್ ಕೋಚ್‌ಗಳು - 10, ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು - 5, ಮತ್ತು ಸೆಕೆಂಡ್ ಕ್ಲಾಸ್ ಕಮ್ ಲಗೇಜ್/ಬ್ರೇಕ್ ವ್ಯಾನ್ ಕೋಚ್-2

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News