ಧ್ವೇಷದ ಹಿಂದುತ್ವ ಕಾಂಗ್ರೆಸ್‍ನಲ್ಲಿಲ್ಲ ನಮ್ಮದು ಪ್ರೀತಿಯ ಹಿಂದುತ್ವ: ಶಾಸಕ ಅಶೋಕ್ ರೈ
ಪುತ್ತೂರು: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ನೋಂದಣಿ ಮಾಡಿಸಿದವರ ಪೈಕಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ, ಅಭಿವೃದ್ದಿ ಕೆಲಸಗಳು ನಡೆಯಬೇಕು ಎಂದು ಕಾಂಗ್ರೆಸ್‍ನವರಲ್ಲಿ ಒತ್ತಾಯ ಮಾಡುತ್ತಾರೆ ಆದರೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಾರೆ. ಹಿಂದುತ್ವ ಎಂದು ಹೇಳಿಕೊಂಡು ಬಿಜೆಪಿಗೆ ಮತ ಹಾಕುತ್ತಾರೆ. ಇಂತಹ ಧ್ವೇಷದ ಹಿಂದುತ್ವ ಕಾಂಗ್ರೆಸ್‍ನಲ್ಲಿಲ್ಲ ನಮ್ಮದು ಪ್ರೀತಿಯ ಹಿಂದುತ್ವ. ಧ್ವೇಷದ ಮನೋಸ್ಥಿತಿ ಬದಲಾಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಮಾಡ್ನೂರು ವಲಯ ಕಾಂಗ್ರೇಸ್ ವತಿಯಿಂದ ಶುಕ್ರವಾರ ನಡೆದ ಕಾರ್ಯಕರ್ತರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾಂಗ್ರೆಸ್‍ನ ಉಚಿತ ಗ್ಯಾರಂಟಿ ಯೋಜನೆಯನ್ನು ಹಿಯ್ಯಾಳಿಸಿದವರೇ ಇಂದು ನೋಂದಣಿ ಮಾಡಿ ಕೊಳ್ಳುತ್ತಿದ್ದಾರೆ , ಸರಕಾರದ ಯೋಜನೆ ಎಲ್ಲರಿಗೂ ಕೊಡುತ್ತೇವೆ ಕಾಂಗ್ರೆಸ್‍ನಲ್ಲಿ ಪಕ್ಷ, ಜಾತಿ, ಧರ್ಮದ ಬೇದವಿಲ್ಲ ಎಲ್ಲರಿಗೂ ಸಮಾನ ನ್ಯಾಯ, ನಾವು ರಾಜಧರ್ಮ ಪಾಲಿಸುವರಾಗಿದ್ದೇವೆ ಎಂದು ಶಾಸಕರು ಹೇಳಿದರು.
ಪುತ್ತೂರಿನಲ್ಲಿ ಕಳೆದ 15 ವರ್ಷಗಳಿಂದ ಪ್ಲಾಟಿಂಗ್ ಆಗಿಲ್ಲ. ಪ್ಲಾಟಿಂಗ್ ಆಗದ ಕಾರಣ ಜನ ತುಂಬಾ ಸಂಕಷ್ಟದಲ್ಲಿದ್ದಾರೆ. ಮುಂದಿನ ಮೂರು ತಿಂಗಳೊಳಗೆ ಪ್ಲಾಟಿಂಗ್ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಲಾಗುವುದು. ಮುಂದೆ ಜಾಗವನ್ನು ಪ್ಲಾಟಿಂಗ್ ಮಾಡಿಸಿ ಜನರ ಮನೆ ಬಾಗಿಲಿಗೆ ಆರ್‍ಟಿಸಿ ತಲುಪಿಸುವ ಕೆಲಸವನ್ನು ಮಾಡುತ್ತೇನೆ, ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡ ಬೇಕು ಎಂದರು
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಭ್ರಷ್ಟಾಚಾರ ಮುಕ್ತ ಪುತ್ತೂರಾಗಿ ಪರಿವರ್ತನೆ ಮಾಡುವಲ್ಲಿ ಶಾಸಕರು ವಹಿಸುತ್ತಿರುವ ಮುತುವರ್ಜಿ ಜನರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಜನರಿಗೆ ಇದೀಗ ನಮ್ಮ ಕೆಲಸ ಆಗುತ್ತದೆ ಎಂಬ ನಂಬಿಕೆ ಮೂಡಿದೆ. ಪಕ್ಷದ ನಿಷ್ಟಾವಂತ ಕಾರ್ಯಕತ್ರ ಅವಿರತ ಶ್ರಮದಿಂದ ಪಕ್ಷದ ಗೆಲುವು ಸಾಧ್ಯವಾಗಿದೆ. ಮುಂದಿನ 25 ವರ್ಷಗಳ ಕಾಲ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರು ಇರಬೇಕು ಆ ರೀತಿಯ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಮತ್ತು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಎಂ.ಬಿ. ವಿಶ್ವನಾಥ ರೈಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಾಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಚಂಧ್ರಶೇಖರ ಬಲ್ಯಾಯ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮಾತನಾಡಿದರು.
ವೇದಿಕೆಯಲ್ಲಿ ಅರಿಯಡ್ಕ ಗ್ರಾಪಂ ಸದಸ್ಯರುಗಳಾದ ದಿವ್ಯನಾಥ ಶೆಟ್ಟಿ ಕಾವು, ಸಲ್ಮಾ, ಜಯಂತಿಪಟ್ಟುಮುಲೆ, ಮೋನಪ್ಪಪೂಜಾರಿ ಕೆರೆಮಾರು, ಶಂಕರ್, ಹಾಜಿ ಅಬ್ದುಲ್ ರಹಿಮಾನ್ ಅರಿಯಡ್ಕ, ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಮೋಹನ್ ದಾಸ್ ಶೆಟ್ಟಿ, ಲಯನ್ಸ್ ಮಾಜಿ ಅದ್ಯಕ್ಷ ಪವನ್‍ರಾಮ್, ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಯಪ್ರಕಾಶ್ ರೈ ನೂಜಿ, ಅಮ್ಮು ರೈ, ಕಾಂಗ್ರೆಸ್ ಉಸ್ತುವಾರಿ ಮಹೇಶ್ ರೈ ಅಂಕೊತ್ತಿಮಾರ್, ಮಾಜಿ ಗ್ರಾಪಂ ಸದಸ್ಯ ಗೋಪಾಲ ಪಾಟಾಳಿ, ಗಂಗಾದರ್ ಪಟ್ಟುಮೂಲೆ, ರವಿಪೂಜಾರಿ, ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಬಲ್ಯಾಯ ಮತ್ತಿತರರು ಉಪಸ್ಥಿತರಿದ್ದರು.
ದ.ಕ.ಜಿ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಸ್ವಾಗತಿಸಿದರು. ಮಹಮ್ಮದ್ ಕುಂಞÂ ಕಾವು ಕಾರ್ಯಕ್ರಮ ನಿರೂಪಿಸಿ ವಂದಿಸಿದರು