ಮೀನುಗಾರಿಕಾ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅನ್ಯಾಯ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಆರೋಪ
Update: 2023-07-05 13:16 GMT
ಮಂಗಳೂರು: ನಗರದ ಹೊಗೈ ಬಜಾರ್‌ನಲ್ಲಿರುವ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಅನ್ಯಾಯವಾಗುತ್ತಿದ್ದು, ಒಂದು ವಾರದೊಳಗೆ ನ್ಯಾಯ ದೊರಕಿಸಿಕೊಡದಿದ್ದರೆ ಕಚೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ದ.ಕ. ಜಿಲ್ಲಾ ಪ್ರಧಾನ ಸಂಚಾಲಕ ಜಗದೀಶ್ ಪಾಂಡೇಶ್ವರ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ಅಧಿಕಾರಿಗಳು ಉದ್ದೇಶಪೂರ್ವಕವಾಗಿ ದಲಿತ ಸಿಬ್ಬಂದಿ ವರ್ಗಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಪದೋನ್ನತಿ ವಿಚಾರದಲ್ಲಿ ಅರ್ಹತೆಯಿದ್ದರೂ ನೀಡದೆ ಅಧಿಕಾರಿಗಳು ವಂಚಿಸಿದ್ದಾರೆ. ಬ್ಯಾಕ್‌ಲಾಗ್ ಹುದ್ದೆಯನ್ನು ಭರ್ತಿಗೊಳಿಸದೆ ಕಾಲಹರಣ ಮಾಡುತ್ತಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ತಾಲೂಕು ಸಂಚಾಲಕ ಕೆ.ಚಂದ್ರ ಕಡಂದಲೆ, ಜಿಲ್ಲಾ ಸಂಘಟನಾ ಸಂಚಾಲಕ ನಾಗೇಶ್ ಮುಲ್ಲಕಾಡು ಉಪಸ್ಥಿತರಿದ್ದರು.