‘ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಆತ್ಮಾವಲೋಕನ’

Update: 2023-06-28 13:51 GMT

ಉಡುಪಿ, ಜೂ.28: ಬಿಜೆಪಿ ವಿರೋಧಿ ಜನಾಕ್ರೋಶದ ಅಲೆಯಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಗದ್ದುಗೆ ಹಿಡಿದಿದ್ದು, ಇದು ಪಕ್ಷದ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ. ಬಿಜೆಪಿ ಆಡಳಿತದಲ್ಲಿ ನಡೆದ ಬೆಲೆ ಏರಿಕೆ, ಅತಿಯಾದ ಭ್ರಷ್ಟಾಚಾರ ನೈತಿಕತೆಯ ದಿವಾಳಿತನದಿಂದ ಜನತೆ ರೋಸಿ ಹೋಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೂ ಬಿಜೆಪಿಗೆ ತನ್ನ ತಪ್ಪಿನ ಅರಿವಾಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು ಹೇಳಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಟಾನದೊಂದಿಗೆ ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಪಕ್ಷ ಸನ್ನದ್ಧಗೊಳ್ಳಬೇಕಿದೆ ಎಂದರು.

ಮಾಜಿ ಸಚಿವ ವಿನಯಕುಮಾಕ ಸೊರಕೆ ಮಾತನಾಡಿ, ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿದರೂ ಕರಾವಳಿ ಪ್ರದೇಶದಲ್ಲಿ ಬಿಜೆಪಿ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಮೇಲ್ಗೈ ಸಾಧಿಸಿದೆ. ನಾವು ಪಕ್ಷದ ಗೆಲುವಿನ ತಂತ್ರಗಾರಿಕೆಯಲ್ಲಿ ಎಡವಿರು ವುದೂ ಹಿನ್ನಡೆಯಾಗಿರಬಹುದು ಎಂದರು.

ಕರಾವಳಿ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವಿನ ಸನಿಹ ಬಂದರೂ ಕೊನೆಯ ಹಂತದಲ್ಲಿ ಬಿಜೆಪಿ ಜನರಲ್ಲಿ ಧಾರ್ಮಿಕ ಭಾವನೆ ಕೆದಕಿ ಗೆಲುವನ್ನು ತನ್ನದಾಗಿಸಿಕೊಂಡಿದೆ. ಮುಂಬರುವ ಚುನಾವಣೆಗಳಲ್ಲಿ ಜನಜಾಗೃತಿಯ ಮೂಲಕ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡೋಣ ಎಂದು ಸೊರಕೆ ಹೇಳಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ ಮುಖಂಡರಾದ ಎಂ. ಎ. ಗಫೂರ್, ಮುನಿಯಾಲು ಉದಯಕುಮಾರ ಶೆಟ್ಟಿ, ವೆರೋನಿಕಾ ಕರ್ನೇಲಿಯೋ, ಬಿ.ನರಸಿಂಹ ಮೂರ್ತಿ, ನೀರೆಕೃಷ್ಣ ಶೆಟ್ಟಿ, ಭುಜಂಗ ಶೆಟ್ಟಿ, ದಿನೇಶ್ ಹೆಗ್ಡೆ ಮೊಳವಳ್ಳಿ, ಕುಶಲ ಶೆಟ್ಟಿ, ಬಿಪಿನ್ ಚಂದ್ರಪಾಲ್ ನಕ್ರೆ, ಹಿರಿಯಣ್ಣ, ಮಹಾಬಲ ಕುಂದರ್, ಇಸ್ಮಾಯಿಲ್ ಅತ್ರಾಡಿ, ಪ್ರದೀಪ್ ಕುಮಾರ್ ವಂಡ್ಸೆ ಪಕ್ಷದ ಸಂಘಟನೆ ಹಾಗೂ ಕರಾವಳಿ ಪ್ರದೇಶದಲ್ಲಿ ಪಕ್ಷದ ಸೋಲಿನ ಆತ್ಮವಲೋಕನ ಮಾಡಿದರು.

ಇತ್ತೀಚೆಗೆ ನಿಧನ ಹೊಂದಿದ ಪಕ್ಷದ ಮುಖಂಡರಾದ ಭಾಸ್ಕರ ಕೋಟ್ಯಾನ್, ಸದಾಶಿವ ನಾಯಕ್ ಬ್ರಹ್ಮಾವರ, ನಾರಾಯಣ ದೇವಾಡಿಗ, ನಾರಾಯಣ ಪೂಜಾರಿ ಅವರ ಬಗ್ಗೆ ಭುಜಂಗ ಶೆಟ್ಟಿ, ಅಣ್ಣಯ್ಯ ಸೇರಿಗಾರ್, ಮದನ್ ಕುಮಾರ್ ನುಡಿ ನಮನ ಸಲ್ಲಿಸಿದರು.

ಸಭೆಯಲ್ಲಿ ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಡಿ. ಆರ್. ರಾಜು, ನವೀನ್‌ಚಂದ್ರ ಶೆಟ್ಟಿ, ಗೀತಾ ವಾಗ್ಳೆ, ಕೃಷ್ಣಮೂರ್ತಿ ಕಾರ್ಕಳ, ಹಬೀಬ್ ಆಲಿ, ಸರಸು ಬಂಗೇರ, ಬ್ಲಾಕ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ಪ್ರದೀಪ್‌ಕುಮಾರ ಶೆಟ್ಟಿ ವಂಡ್ಸೆ, ಸಂತೋಷ ಕುಲಾಲ್, ಮದನ್ ಕುಮಾರ್, ರಮೇಶ್ ಕಾಂಚನ್, ಡಾ.ಸುನಿತಾ ಶೆಟ್ಟಿ, ದೇವಕಿ ಸಣ್ಣಯ್ಯ, ರೋಶನಿ ಒಲಿವರಾ, ಜ್ಯೋತಿ ಹೆಬ್ಬಾರ್, ಶಬ್ಬಿರ್ ಅಹ್ಮದ್, ಮುರಲಿ ಶೆಟ್ಟಿ, ಪ್ರಶಾಂತ ಜತ್ತನ್ನ, ದಿವಾಕರ ಕುಂದರ್, ಪ್ರಖ್ಯಾತ ಶೆಟ್ಟಿ, ಯತೀಶ್ ಕರ್ಕೇರ, ಹರೀಶ್ ಶೆಟ್ಟಿ ಪಾಂಗಾಳ, ಶಶಿಧರ ಶೆಟ್ಟಿ ಎಲ್ಲೂರು, ಜಯ ಕುಮಾರ್, ಕೀರ್ತಿ ಶೆಟ್ಟಿ, ರೋಶನ್ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಕಿರಣ್ ಹೆಗ್ಡೆ, ಬಾಲಕೃಷ್ಣ ಪೂಜಾರಿ, ಆನಂದ ಪೂಜಾರಿ, ವಿನಯ ಬಲ್ಲಾಳ್, ದೀಪಕ್ ಕೋಟ್ಯಾನ್, ವೈ.ಸುಕುಮಾರ್, ಪ್ರಸನ್ನ ಕುಮಾರ್, ವಿಶ್ವಾಸ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ಕಿಣಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News