ಕಟಪಾಡಿ: ಕಾರ್ಮಿಕರ ಮಧ್ಯೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ; ಆರೋಪಿ ಪರಾರಿ

Update: 2023-07-17 20:22 IST
ಕಟಪಾಡಿ: ಕಾರ್ಮಿಕರ ಮಧ್ಯೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ; ಆರೋಪಿ ಪರಾರಿ
  • whatsapp icon

ಕಾಪು, ಜು.17: ಕೆಲಸದ ವಿಚಾರವಾಗಿ ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜು.17ರಂದು ಸಂಜೆ ಕಟಪಾಡಿಯಲ್ಲಿ ನಡೆದಿದೆ.

ಕೊಲೆಗೀಡಾದ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಕಟಪಾಡಿ -ಶಿರ್ವ ರಸ್ತೆಯಲ್ಲಿರುವ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಇವರಿಬ್ಬರ ಮಧ್ಯೆ ಕೆಲಸದ ವಿಚಾರವಾಗಿ ಜಗಳ ನಡೆದಿತ್ತು. ಹೊಡೆದಾಟದಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಗಣೇಶ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಗಣೇಶ್ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ, ಕಾಪು ಎಸ್ಸೈ ಶ್ರೀಶೈಲ ಮುರಗೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News