ಕೊಣಾಜೆ: ಯುವತಿ ಆತ್ಮಹತ್ಯೆ

Update: 2023-07-06 13:44 GMT

ಕೊಣಾಜೆ: ಪಜೀರಿನ ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪ್ರೀತಿಕಾ ಪೂಜಾರಿ (21) ಎಂದು ಗುರುತಿಸಲಾಗಿದೆ.

ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು. ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿಚಾರ ಬೆಳಕಿಗೆ ಬಂದಿದೆ. ಮಧ್ಯಾಹ್ನ ಕಚೇರಿಯಿಂದ ಬಂದ ಆಕೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಲಾಗಿದೆ.

ಕೊಣಾಜೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News