ಮಂಗಳೂರು: ತಾ.ಪಂ.- ಜಿ.ಪಂ. ಸಾರ್ವತ್ರಿಕ ಚುನಾವಣೆ

Update: 2023-06-26 13:52 GMT

ಮಂಗಳೂರು: ತಾಪಂ ಮತ್ತು ಜಿಪಂ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಜೂ.೨೩ರಂದು ಮಂಗಳೂರು, ಮುಲ್ಕಿ, ಮೂಡುಬಿದಿರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕು ಕಚೇರಿಗಳಲ್ಲಿ ಹಾಗೂ ಗ್ರಾಪಂ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ಜುಲೈ ೪ರೊಳಗೆ ಈ ಕರಡು ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಜುಲೈ ೭ರಂದು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಯನ್ನು ಮಾಡಿಸಿ ಅಂತಿಮ ಚಕ್ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಜು.೧೨ರಂದು ಮತ್ತೊಮ್ಮೆ ಪರಿಶೀಲನೆಗೊಳ ಪಡಿಸಲಾಗುವುದು. ಅಂತಿಮ ಮತದಾರರ ಪಟ್ಟಿಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News