ಜು.14ರಂದು ಮಿನಿ ಉದ್ಯೋಗ ಮೇಳ

Update: 2023-07-11 15:14 GMT

ಉಡುಪಿ, ಜು.11: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News