ಕುಂದಾಪ್ರ ಕನ್ನಡ ದಿನಾಚರಣೆಗೆ ಶುಭ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Update: 2023-07-17 15:51 GMT

ಉಡುಪಿ: ಕನ್ನಡ ಭಾಷೆಯ ಅತ್ಯಂತ ಸರಳ ಹಾಗೂ ಸಂಕ್ಷಿಪ್ತ ರೂಪವೆನಿಸಿಕೊಂಡಿರುವ ‘ಕುಂದಾಪ್ರ ಕನ್ನಡ’ ಭಾಷೆಯ ಸೊಬಗನ್ನು ವರ್ಣಿಸಲಾಗದು. ಈ ಭಾಷೆಗೆ ತನ್ನದೇ ಆದ ವೈಶಿಷ್ಟ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಕುಂದಾಪ್ರ ಕನ್ನಡ ದಿನಾಚರಣೆಗೆ ಶುಭಕೋರಿದ ಸಚಿವರು, ಕುಂದಾಪ್ರ ಕನ್ನಡ ಭಾಷಿಕರು ರಾಜ್ಯ ರಾಜಧಾನಿ ಸೇರಿದಂತೆ ಜಗತ್ತಿನ ವಿವಿಧ ದೇಶಗಳಲ್ಲಿ ನೆಲೆನಿಂತಿದ್ದಾರೆ. ಈ ಮಧ್ಯೆಯೂ ತಮ್ಮ ಭಾಷೆಗೊಂದು ಅಸ್ತಿತ್ವ ಬೇಕೆನ್ನುವ ಉದ್ದೇಶದಿಂದ ಪ್ರತಿವರ್ಷ ಅಸಾಡಿ ಅಮವಾಸ್ಯೆ ದಿನದಂದು ವಿಶ್ವ ಕುಂದಾಪ್ರ ಕನ್ನಡ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಕುಂದಾಪ್ರ ಕನ್ನಡವನ್ನು ಪೂಜಿಸಿ, ಆರಾಧಿಸುವ ಎಲ್ಲ ಕುಂದಾಪ್ರ ಕನ್ನಡ ಭಾಷಿಕರಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಹಾರ್ದಿಕ ಶುಭಾಶಯಗಳು ಎಂದು ಸಚಿವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News