ಜು.30ರವರೆಗೆ ʼವಿಮ್ʼನಿಂದ ರಾಷ್ಟ್ರೀಯ ಜಾಗೃತಿ ಅಭಿಯಾನ
Update: 2023-07-08 17:45 GMT
ಮಂಗಳೂರು, ಜು.8: ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲೂ ಮಹಿಳೆಯರು ಮುಂದುವರಿಯುತ್ತಿದ್ದರೂ ಭಾರತದಲ್ಲಿ ಮಹಿಳೆಯರ ಪರಿಸ್ಥಿತಿಯು ತೀರಾ ಶೋಚನೀಯವಾಗಿದೆ. ಈ ಎಲ್ಲಾ ಕ್ಷೇತ್ರದಲ್ಲಿ ಆಕೆಯು ನಿರಂತರವಾಗಿ ದೌರ್ಜನ್ಯ ಕ್ಕೊಳಗಾಗುತ್ತಿದ್ದಾಳೆ. ಸರಕಾರದ ಜನವಿರೋಧಿ ಆಡಳಿತದಿಂದಾಗಿ ದೇಶದ ಕಾನೂನು ಸುವ್ಯವಸ್ಥೆ, ಕಾನೂನು ದುರುಪಯೋಗದ ನೇರ ಪರಿಣಾಮವನ್ನು ಅನುಭವಿಸುತ್ತಿರುವುದು ಈ ದೇಶದ ಮಹಿಳಾ ವರ್ಗವಾಗಿದೆ.
ಈ ನಿಟ್ಟಿನಲ್ಲಿ ವಿಮೆನ್ ಇಂಡಿಯಾ ಮೂವ್‌ಮೆಂಟ್‌ನಿಂದ ‘ಅನ್ಯಾಯದ ವಿರುದ್ಧ ಒಂದಾಗಿ ಸೆಟೆದು ನಿಲ್ಲಿರಿ’ ಎಂಬ ಘೋಷಣೆಯೊಂದಿಗೆ ಜು.30ವರೆಗೆ ರಾಷ್ಟ್ರೀಯ ಜಾಗೃತಿ ಅಭಿಯಾನ ಆಯೋಜಿಸಲಾಗಿದೆ.
ರಾಜ್ಯಾದ್ಯಂತ ಸೆಮಿನಾರ್, ವೆಬಿನಾರ್, ಬಿತ್ತಿಪತ್ರ ಹಂಚಿಕೆ, ಕುಟುಂಬ ಸಮ್ಮಿಲನ, ಪೋಸ್ಟರ್ ಕ್ಯಾಂಪೇನ್ ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.