ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್'

Update: 2023-07-03 15:17 GMT

ಬೆಂಗಳೂರು, ಜು.3: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜು.4ರಿಂದ ಜು.7ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಇನ್ನೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಜು. 4ರಿಂದ ಜು.7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜು.5ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 48 ಗಂಟೆ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸೋಮವಾರ ಸುರಿದ ಮಳೆ: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಳಗಾವಿ, ಕೊಪ್ಪಳ, ಕೊಡಗು ಸೇರಿ ರಾಜ್ಯದ ವಿವಿಧೆಡೆ ಸೋಮವಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡು, ಕರಾವಳಿಯ ಬಹುತೇಕ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News