ಪ್ರತಿಭಾ ಪುರಸ್ಕಾರ, ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ

Update: 2023-07-16 14:20 GMT

ಕುಂದಾಪುರ, ಜು.16: ಅತ್ಯುತ್ತಮವಾಗಿ ಪ್ರತಿಭೆಯನ್ನು ತೋರ್ಪಡಿಸುವ ವಿದ್ಯಾರ್ಥಿಗಳನ್ನು ಸಮಾಜ ಮೆರವಣಿಗೆ ಮಾಡುತ್ತದೆ. ಅದೇ ಸೊಮಾರಿಗಳಾಗಿ ಎಲ್ಲೋ ಮೂಲೆಯಲ್ಲಿ ಕುಳಿತರೇ ನಿಮ್ಮನ್ನು ಈ ಸಮಾಜ ಗುರುತಿಸುವುದಿಲ್ಲ ಎಂದು ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಶಾಲೆ ಉಪಪ್ರಾಂಶುಪಾಲ ಚಂದ್ರ ಶೇಖರ ಶೆಟ್ಟಿ ಹೇಳಿದ್ದಾರೆ.

ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಹಳೇ ವಿದ್ಯಾರ್ಥಿ ಸಂಘದಿಂದ ಇತ್ತೀಚೆಗೆ ನಡೆದ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕೊಡ ಮಾಡಿದ ಹತ್ತನೇ ವರ್ಷದ ಪ್ರತಿಭಾ ಪುರಸ್ಕಾರ ಪ್ರೋತ್ಸಾಹ ಧನ ವಿತರಣಾ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕಲಿಕೆ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರ ಯಾವುದಾದರಲ್ಲಿ ಕೂಡ ನಾವು ಪ್ರತಿಭಾ ವಂತರಾದರೇ ನಮ್ಮನ್ನು ಹೊತ್ತು ಮೆರವಣಿಗೆ ಮಾಡುವ ವಿವಿಧ ಸಂಸ್ಥೆ ಗಳು ಈ ಸಮಾಜದಲ್ಲಿವೆ. ಸಂಘಟನೆಯ ಆರಂಭ ಮಾಡುವುದು ಸುಲಭ ಅದನ್ನು ಮುನ್ನೆಡೆಸಿಕೊಂಡು ಹೋಗುವುದು ಬಹಳ ಕಠಿಣ. ಇತಂಹ ದುರ್ಗಮ ಪರಿಸ್ಥಿತಿಯಲ್ಲೂ ಕೂಡ ಈ ಕಾರ್ಯ ಮುಂದುವರೆಸಿಕೊಂಡು ಬಂದಿರುವುದರ ಜೊತೆಗೆ ಈ ಶಾಲೆಯಲ್ಲಿ ಕಲಿತು ಸಮಾಜದಲ್ಲಿ ಪಡೆದಕೊಂಡಿರುವುದನ್ನ ಸಮಾಜಕ್ಕೆ ಹಿಂದಿರುಗಿಸಿದ ಸ್ನೇಹ ಸಂಗಮದ ಕಾರ್ಯ ಶ್ಲಾಘನೀಯ ಎಂದರು.

ಹಿರಿಯ ಶಿಕ್ಷಕ ಪ್ರದೀಪ್ ಶಾನುಭೋಗ್, ಎಸ್.ಡಿ.ಎಂ.ಸಿ ಸದಸ್ಯ ನಾರಾಯಣ ಬಂಗೇರ, ಸ್ನೇಹ ಸಂಗಮದ ಮುಖ್ಯಸ್ಥರಾದ ಗಿರೀಶ್, ರವಿ ದೇವಾಡಿಗ, ಸಂತೋಷಕುಮಾರ್ ಬಿ.ಎಸ್., ಯೋಗಿಶ್ ದೇವಾಡಿಗ, ರಾಘವೇಂದ್ರ ಎಸ್.ಬೀಜಾಡಿ ಉಪಸ್ಥಿತರಿದ್ದರು.

ಶಿಕ್ಷಕ ಶ್ರೀಕಾಂತ್ ಸ್ವಾಗತಿಸಿದರು, ಶಿಕ್ಷಕಿ ಪೀತಾಂಬರಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ. ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News