ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ಪ್ರದರ್ಶನ -ಸ್ಪರ್ಧೆ

Update: 2023-06-24 13:59 GMT

ಉಡುಪಿ, ಜೂ.24: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಪಠ್ಯೇತರ ಘಟಕ ಮತ್ತು ಹವ್ಯಾಸ ಪ್ರಾಜೆಕ್ಟ್ ಕ್ಲಬ್ ಸಹಯೋಗ ದೊಂದಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಇಂದು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು.

ಪ್ರಾಜೆಕ್ಟ್ ಸ್ಪರ್ಧೆಯನ್ನು ಉದ್ಘಾಟಿಸಿದ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇಂತಹ ಪ್ರಾಜೆಕ್ಟ್‌ಗಳನ್ನು ಮಾಡುವುದರೊಂದಿಗೆ ತಮ್ಮ ಜ್ಞಾನವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು. ಈ ಸ್ಪರ್ಧೆಗಾಗಿ ತಯಾರಿಸಿದ ಪ್ರಾಜೆಕ್ಟ್‌ಗಳನ್ನು ಇನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಯೋಜಿಸುವ ಪ್ರಾಜೆಕ್ಟ್ ಸ್ಪರ್ಧೆಗಳಿಗೆ ಭಾಗವಹಿಸಬೇಕು ಎಂದರು.

ಒಟ್ಟು 59 ಪ್ರಾಜೆಕ್ಟ್‌ಗಳನ್ನು ಪ್ರದರ್ಶಿಸಲಾಯಿತು. ಮೊದಲನೇ ವರ್ಷದ ಇಂಜಿನಿಯರಿಂಗ್ ವಿಭಾಗದಿಂದ 6 ಯೋಜನೆಗಳು, ಎರಡನೇ ವರ್ಷದ ಇಂಜಿನಿಯರಿಂಗ್ ವಿಭಾಗದಿಂದ 38 ಮತ್ತು ಮೂರನೇ ವರ್ಷದ ಇಂಜಿ ನಿಯರಿಂಗ್ ವಿಭಾಗದಿಂದ 15 ಯೋಜನೆಗಳ ವಿವಿಧ ಮಾದರಿಗಳನ್ನು ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರದರ್ಶಿಸಿದರು.

ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲ ಡಾ. ಗಣೇಶ್ ಐತಾಳ್, ಡೀನ್ ಡಾ.ಸುದರ್ಶನ್ ರಾವ್ ಕೆ. ವಿವಿಧ ವಿಬಾಗದ ಮುಖ್ಯಸ್ಥರು ಪ್ರಾಜೆಕ್ಟ್ ಪ್ರದರ್ಶನಕ್ಕೆ ಬೇಟಿ ನೀಡಿ ಪ್ರಾಜೆಕ್ಟ್ ಪ್ರದರ್ಶಿಸುತಿತಿದ್ದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಉತ್ತಮ ಸಲಹೆ ನೀಡಿದರು. ಅಲ್ಲದೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಐದು ಪ್ರಾಜೆಕ್ಟ್‌ಗಳಿಗೆ ಬಹುಮಾನ ನೀಡಲಾಯಿತು. ಕಾಲೇಜಿನ ಪಠ್ಯೇತರ ಘಟಕದ ಸಂಯೋಜಕ ಡಾ.ರೆನಿಟಾ ಶರೋನ್ ಮೋನಿಸ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News