ಪಂಪ್‌ವೆಲ್ ಜಲಾವೃತ ಘಟನೆ: ಶಾಶ್ವತ ಕ್ರಮಕ್ಕೆ ವರದಿ ಕೇಳಿದ ಮಂಗಳೂರು ಮನಪಾ

Update: 2023-07-04 16:08 GMT

ಮಂಗಳೂರು: ಸೋಮವಾರ ಸುರಿದ ಭಾರೀ ಮಳೆಯಿಂದಾಗಿ ನಗರದ ಪಂಪ್‌ವೆಲ್ ಜಲಾವೃತಗೊಂಡ ಘಟನೆಯ ಹಿನ್ನಲೆಯಲ್ಲಿ ಶಾಶ್ವತ ಕ್ರಮಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಂದ ಮಂಗಳೂರು ಮನಪಾ ಆಡಳಿತವು ತಾಂತ್ರಿಕ ವರದಿ ಕೇಳಿದೆ.

ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ದ.ಕ.ಜಿಲ್ಲಾಧಿಕಾರಿ, ಸ್ಥಳೀಯ ಶಾಸಕರು, ಮೇಯರ್, ಇಂಜಿನಿಯರ್, ಮನಪಾ ಆಯುಕ್ತರು ಚರ್ಚೆ ನಡೆಸಿದ್ದಾರೆ. ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಪರಸ್ಪರ ಸಮಲೋಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ‘ವಾರ್ತಾಭಾರತಿ’ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ಮನಪಾ ಆಯುಕ್ತ ಆನಂದ್ ಸಿ.ಎಲ್. ‘ಘಟನೆಗೆ ಸಂಬಂಧಿಸಿದಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ನಾವು ಕೂಡ ಈ ಬಗ್ಗೆ ಚರ್ಚೆ ನಡೆಸಿ ಇದರ ಶಾಶ್ವತ ಕ್ರಮಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಂದ ತಾಂತ್ರಿಕ ವರದಿಯನ್ನು ಕೇಳಿದ್ದೇವೆ. ವರದಿಯ ಬಳಿಕ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದಾರೆ.

‘ಪಂಪ್‌ವೆಲ್ ಜಲಾವೃತ’ದ ಬಗ್ಗೆ ಸಂಸದರ ಸಹಿತ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News