ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ: ಎಬಿವಿಪಿ ಧರಣಿ

Update: 2023-06-28 14:07 GMT

ಉಡುಪಿ, ಜೂ.28: ಸರಕಾರಿ ಬಸ್ ಕೊರತೆ ಮತ್ತು ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಬುಧವಾರ ಧರಣಿ ನಡೆಸಲಾಯಿತು.

ಎಪಿವಿಬಿ ನಗರ ಸಹ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಶಕ್ತಿ ಯೋಜನೆ ಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಗ್ರಾಮೀಣ ಪ್ರದೇಶ ಮತ್ತು ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳು ತರಗತಿಗೆ ಬರುವ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದರಿಂದ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಈ ಸಮಸ್ಯೆ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸ ಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಳಿಕ ಈ ಕುರಿತು ಉಡುಪಿ ವಿಭಾಗದ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ರಿಗೆ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುಮುಖ ಭಟ್, ತಾಲೂಕು ಸಂಚಾಲಕ ಶ್ರೀಹರಿ, ನಗರ ಕಾರ್ಯದರ್ಶಿ ಗಣೇಶ್ ಪೂಜಾರಿ ಹಾಗೂ ಪ್ರಮುಖರಾದ ಆಶೀಶ್ ಶೆಟ್ಟಿ, ಅಜಿತ್, ವಿನೋದ, ನವೀನ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News