ಜು.8: ಸರ್ವೆಯರ್ ಪರೀಕ್ಷೆ ಹಿನ್ನೆಲೆ; ನಿಷೇಧಾಜ್ಞೆ

Update: 2023-07-06 14:21 GMT

ಮಂಗಳೂರು, ಜು.6: ಕರ್ನಾಟಕ ಭೂ ದಾಖಲೆಗಳ ಇಲಾಖೆ ವತಿಯಿಂದ ಲೈಸನ್ಸ್ಡ್ ಸರ್ವೆಯರ್ ಆನ್‌ಲೈನ್ ಪರೀಕ್ಷೆಯು ಮೂಡುಬಿದರೆಯ ಯೆನಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ನಗರದ ಮಂಗಳೂರು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್‌ನಲ್ಲಿ ಜು.8ರಂದು ನಡೆಯಲಿದೆ.

ಈ ಪರೀಕ್ಷೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ವ್ಯಾಪ್ತಿಯ ಪ್ರದೇಶದಲ್ಲಿ ಸಿಆರ್‌ಪಿಸಿ ಕಲಂ 144ರಂತೆ ಅಂದು ಬೆಳಗ್ಗೆ 10:30ರಿಂದ ಸಂಜೆ 5ರವರೆಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಅಂಶುಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News