ತುಂಬೆ: ಕಾರು ಅಪಘಾತದಲ್ಲಿ ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದರೆಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಗುರುವಾರ ವರದಿಯಾಗಿದೆ.
ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರಿ, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ ಖತೀಜತ್ ಹನಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆ ಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಯುವತಿ ಹೊರೆಕ್ಕೆಸೆಯಲ್ಟಿಟ್ಟಿದ್ದರೆನ್ನಲಾಗಿದ್ದು, ಗಂಭೀರ ಗಾಯಗೊಂಡ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಅದಾಗಲೇ ಆಕೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರ ಜೊತೆಗಿದ್ದ ಈಕೆಯ ತಾಯಿ ಮತ್ತು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಇವರು ಪುತ್ತೂರಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಹೋಗುತ್ತಿದ್ದ ವೇಳೆ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ ಎನ್ನಲಾಗಿದೆ .
ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣಾಧಿಕಾರಿ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಬೇಟಿ ನೀಡಿದ್ದಾರೆ.