ಉಡುಪಿ: ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ತರಬೇತಿ ಶಿಬಿರ

Update: 2023-06-27 15:03 GMT

ಉಡುಪಿ, ಜೂ.27: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೂರ್ಣಪ್ರಜ್ಞ ಮ್ಯಾನೇಜ್‌ಮೆಂಟ್ ಸಂಶೋಧನ ಹಾಗೂ ಅಭಿವೃದ್ಧಿ ಕೇಂದ್ರ ಉಡುಪಿ, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಉಡುಪಿ, ಕರ್ನಾಟಕ ಬ್ಯಾಂಕ್ ಮಂಗಳೂರು ಹಾಗೂ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಬೆಂಗಳೂರು ಇವರ ಸಂಯುಕ್ತ ಆಶ್ರಯ ದಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಶಿಬಿರದ ಉದ್ಘಾಟನೆ ಇಂದು ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಮಹಿಳಾ ಸಬಲೀಕರಣದ ಅಂಗವಾಗಿ ಕಾನೂನು ಅರಿವು ಮಾಹಿತಿಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಶ್ಯಾಮ್ ಕಶ್ಯಪ್, ಮಹಿಳಾ ಸಬಲೀಕರಣಕ್ಕಾಗಿ ತರಬೇತಿ ವಿನ್ಯಾಸ ಹಾಗೂ ಮಹಿಳೆ ಸಮಾಜದಲ್ಲಿ ಮಾನ್ಯತೆ ಪಡೆಯಲು ಇರಬೇಕಾದ ಪೂರಕ ಅಂಶಗಳ ಕುರಿತು ಮಾಹಿತಿ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು, ಅಂಗನವಾಡಿ ಕಾರ‌್ಯಕರ್ತೆಯರು ಹಾಗೂ ಸಹಾಯಕಿಯರು, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಡಾ.ಕೃಷ್ಣ ಕೊತಾಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ.ಡೆನಿಟಾ ನಿರೂಪಿಸಿ, ಹಿರಿಯ ಮೇಲ್ವಿಚಾರಕಿ ಶಾಂತಿ ಪ್ರಭು ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News