ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ಉಪಚುನಾವಣೆ: ವೇಳಾಪಟ್ಟಿ ಪ್ರಕಟ

Update: 2023-07-06 16:04 GMT

ಉಡುಪಿ, ಜು.6: ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣ ಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಅದರಂತೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮ ಪಂಚಾಯತ್‌ನ ಹಿಂದುಳಿದ ವರ್ಗ ಅ, ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್‌ನ ಸಾಮಾನ್ಯ ಮಹಿಳೆ ಹಾಗೂ ಕುಂಭಾಶಿ ಗ್ರಾಮ ಪಂಚಾಯತ್‌ನ ಅನುಸೂಚಿತ ಪಂಗಡ ಮಹಿಳೆ ತಲಾ 1 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಜುಲೈ 12 ಕೊನೆಯ ದಿನವಾಗಿದೆ. ಜುಲೈ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಜುಲೈ 15 ಕೊನೆಯ ದಿನ. ಜುಲೈ 23ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಜುಲೈ 26ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ. ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಜುಲೈ 6ರಿಂದ 26 ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News