ಉಡುಪಿ: ಜುಲೈ 4ರಿಂದ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Update: 2023-07-01 14:42 GMT

ಉಡುಪಿ, ಜು.1: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಹಿನ್ನೆಲೆಯಲ್ಲಿ ಇದೇ ಜುಲೈ 4ರಿಂದ 6ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

220/110/11 ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್‌ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

110/11 ಕೆವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರು ವುದರಿಂದ ಕಡ್ತಲ, ಗುಡ್ಡೆಯಂಗಡಿ, ದೊಂಡರಂಗಡಿ, ಎಳ್ಳಾರೆ, ಕಾಡುಹೊಳೆ, ಅಜೆಕಾರು ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ವಿ.ಪಿ.ನಗರ, ವಿ.ಆರ್.ನಗರ ಮತ್ತು ರೋಯಲ್ ಎಂಬೆಸಿ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸಿಂಡಿಕೇಟ್ ಸರ್ಕಲ್, ಎಂ.ಜಿ.ಸಿ ಸ್ಕೂಲ್, ಬಿ.ಎಸ್.ಎನ್.ಎಲ್ ಟೆಲಿಫೋನ್ ಎಕ್ಸ್ ಚೇಂಜ್, ವಿದ್ಯಾರತ್ನ ನಗರ, ಡಿ.ಸಿ.ಆಫೀಸ್, ಆರ್‌ಟಿಓ ಆಫೀಸ್, ಪೆರಂಪಳ್ಳಿ, ಸಗ್ರಿ ನೋಳೆ, ರೋಯಲ್ ಎಂಬೆಸಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 4 ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ಕೆವಿ ಮಧುವನ ಉಪಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್‌ಪ್ರೆಸ್ ಫೀಡರಿನಲ್ಲಿ, 110/11 ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರ ದಿಂದ ಹೊರಡುವ 11 ಕೆವಿ ಚೇರ್ಕಾಡಿ, ಕೊಕ್ಕರ್ಣೆ ಮತ್ತು ಹೊನ್ನಾಳ ಫೀಡರ್ ಮಾರ್ಗದಲ್ಲಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರ ದಿಂದ ಹೊರಡುವ 11 ಕೆವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬ್ರಹ್ಮಾವರ, ರಥಬೀದಿ ಪೇಟೆ, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಢ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 4ರಂದು ಬೆಳಗ್ಗೆ 9:30 ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಶಿವಪುರ, ಚಾರ, ಮುದ್ರಾಡಿ ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಚಾರ, ಹೊಸೂರು,ಶಿವಪುರ, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ, ಸರಕಾರಿ ಆಸ್ಪತ್ರೆ ಬಳಿ, ಮುದ್ರಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 5ರಂದು ಬೆಳಗ್ಗೆ 9 ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11ಕೆವಿ ಶಿರ್ವ ಎಂ.ಯು.ಎಸ್.ಎಸ್ ಬ್ಯಾಂಕ್-1ರಲ್ಲಿ ಕೆಲವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರ್ವ ಎಂ.ಯು.ಎಸ್.ಎಸ್‌ನ ಬ್ಯಾಂಕ್-1ರಿಂದ ಹೊರಡುವ 11ಕೆವಿ ಬಂಟಕಲ್ಲು, ಶಿರ್ವ ಹಾಗೂ ಮುದರಂಗಡಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ ಗ್ರಾಮ, ಬಂಟಕಲ್ಲು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಗ್ರಾಮ, ಮಟ್ಟಾರು ಗ್ರಾಮ, ಪದವು ಪಾಂಬೂರು, ಪಂಜಿಮಾರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು ಗ್ರಾಮ, ಚಂದ್ರನಗರ, ಮಲ್ಲಾರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 6 ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News