ಉಡುಪಿ: ಜಿಪಂ, ತಾಪಂ ಚುನಾವಣೆ; ಕರಡು ಮತದಾರರ ಪಟ್ಟಿ ಪ್ರಕಟ

Update: 2023-06-28 14:18 GMT

ಸಾಂದರ್ಭಿಕ ಚಿತ್ರ

ಉಡುಪಿ: ಮುಂಬರುವ ಜಿಪಂ ಮತ್ತು ತಾಪಂ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಬೈಂದೂರು, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕು ಕಚೇರಿಗಳಲ್ಲಿ, ಕುಂದಾಪುರದ ಸಹಾಯಕ ಆಯುಕ್ತರ ಕಚೇರಿ, ಗ್ರಾಮ ಪಂಚಾಯತ್ ಕಚೇರಿ ಗಳಲ್ಲಿ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಪಟ್ಟಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ ೪ ಹಾಗೂ ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲು ಜುಲೈ ೭ ಕೊನೆಯ ದಿನವಾಗಿದೆ. ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆ ಮಾಡಿಸಿ ಅಂತಿಮ ಚೆಕ್ ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಜುಲೈ ೧೨ರಂದು ಮತ್ತೊಮ್ಮೆ ಪರಿಶೀಲಿಸಲಾಗುವುದು.

ಈ ಮತದಾರರ ಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಂಬಂದಪಟ್ಟ ತಾಲೂಕು ವ್ಯಾಪ್ತಿಯ ತಹಶೀಲ್ದಾರ್ ಅವರ ಕಚೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News