ಉಳ್ಳಾಲ: ನೀರಿಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಮನೆಮಂದಿಗೆ 5 ಲಕ್ಷ ರೂ. ಪರಿಹಾರ

Update: 2023-07-05 17:37 GMT

ಸಾಂದರ್ಭಿಕ ಚಿತ್ರ

ಉಳ್ಳಾಲ: ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ಖಜಾನೆ 2 ಮುಖೇನ ನೀಡಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಖಜಾನೆ 2 ಮುಖೇನ ಪತ್ನಿ ಶಾಂಭ ಅವರಿಗೆ ನೀಡಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News