ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2023-06-24 15:55 GMT

ಕೋಟ, ಜೂ.24: ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜೂ.23ರಂದು ರಾತ್ರಿ ವೇಳೆ ಕಾವಡಿ ಹೊಳೆಯ ಸೇತುವೆ ಸಮೀಪ ನಡೆದಿದೆ.

ಮೃತರನ್ನು ನಾಗೇಶ್ ಎಂದು ಗುರುತಿಸಲಾಗಿದೆ. ಇವರ ಬೈಕಿಗೆ ಯಡ್ತಾಡಿ ಕಡೆಯಿಂದ ಸಾಲಿಗ್ರಾಮ ಕಡೆಗೆ ಬರುವ ಅಪರಿಚಿತ ವಾಹನ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಾಗೇಶ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರುವ ದಾರಿ ಮಧ್ಯೆ ಮೃತ ಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News