ಕಾಸರಗೋಡಿನಲ್ಲಿ ಭಾರೀ ಮಳೆ: ಜು.15 ರಂದು ಶಾಲೆಗೆ ರಜೆ ಘೋಷಣೆ

Update: 2024-07-14 12:46 GMT

ಸಾಂದರ್ಭಿಕ ಚಿತ್ರ 

ಕಾಸರಗೋಡು: ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಿಗೆ ನಾಳೆ (ಜುಲೈ 15)ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆ ಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ರವಿವಾರ ಮಧ್ಯಾಹ್ನದ ಬಳಿಕ ಭಾರೀ ಗಾಳಿ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ರಾಜ್ಯ, ಸಿ ಬಿ ಎಸ್ ಇ, ಐ ಸಿ ಎಸ್ ಸಿ ಶಾಲೆಗಳು. ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದ್ರಸ ಮೊದಲಾದವುಗಳಿಗೆ ರಜೆ ಅನ್ವಯವಾಗಲಿದೆ.

ಕಾಲೇಜುಗಳಿಗೆ ಈ ರಜೆ ಅನ್ವಯವಾಗುವುದಿಲ್ಲ. ಪೂರ್ವಭಾವಿ ನಿರ್ಧಾರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News