ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿ ಒಂದೂವರೆ ವರ್ಷದ ಮಗು ಮೃತ್ಯು
Update: 2023-12-19 12:07 GMT
ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಕಲ್ಲೂರಾವಿ ಎಂಬಲ್ಲಿ ನಡೆದಿದೆ.
ಕಾಞಂಗಾಡ್ ಕಲ್ಲೂರಾವಿಯ ಬಾವನಗರದ ರಂಶೀದ್ ಅವರ ಪುತ್ರಿ ಜೆಸಾ ಮೃತಪಟ್ಟ ಮಗು.
ಎರಡು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಸೊಳ್ಳೆ ನಿವಾರಕ ದ್ರಾವಣವನ್ನು ಸೇವಿಸಿದ್ದು, ಇದನ್ನು ಗಮನಿಸಿದ ಮನೆಯವರು ಮಗುವಿಗೆ ಕಾಞಂಗಾಡ್ ನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮಂಗಳವಾರ ಬೆಳಗ್ಗೆ ಮೃತ ಪಟ್ಟಿದೆ ಎಂದು ತಿಳಿದುಬಂದಿದೆ.