ಕಾಸರಗೋಡು: ಶಾಲಾ ಬಸ್ - ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌; ಐವರು ಮೃತ್ಯು

Update: 2023-09-25 13:35 GMT

ಕಾಸರಗೋಡು : ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ ಐದು ಮಂದಿ ಮೃತಪಟ್ಟ ಘಟನೆ ಇಂದು ಸಂಜೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.

ಆಟೋದಲ್ಲಿದ್ದ ಚಾಲಕ ಸೇರಿ ಐದು ಮಂದಿ ಮೃತಪಟ್ಟಿದ್ದಾರೆ. ಸಂಜೆ 5.45ರ ಸುಮಾರಿಗೆ ಅಪಘಾತ ನಡೆದಿದೆ. ಮೃತಪಟ್ಟವರು ಮೊಗ್ರಾಲ್ ಪುತ್ತೂರು ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳನ್ನು ಇಳಿಸಿ ಮರಳುತ್ತಿದ್ದ ಶಾಲಾ ಬಸ್ಸು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ನಡೆದಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

ಬದಿಯಡ್ಕ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಮೃತಪಟ್ಟವರ ಬಗ್ಗೆ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.






 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News