ಕಾಸರಗೋಡು: ಬೈಕ್ ಗಳು ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಮೃತ್ಯು

Update: 2024-05-15 07:13 GMT

ಕಾಸರಗೋಡು: ಬೈಕ್ ಗಳ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತ ಪಟ್ಟು, ಮೂವರು ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಚಟ್ಟಂಚಾಲ್ ನಲ್ಲಿ ನಡೆದಿದೆ.

ತೆಕ್ಕಿಲ್ ಬೆಂಡಿಚ್ಚಾಲ್ ನ ಮುಹಮ್ಮದ್ ತಸ್ಲೀಮ್ (20) ಮೃತಪಟ್ಟ ವಿದ್ಯಾರ್ಥಿ. ಚಟ್ಟಂಚಾಲ್ ಸಬ್ ಟ್ರೆಜರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ.

ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ತಸ್ಲೀಮ್ ಮಂಗಳೂರಿನ ಕಾಲೇಜೊಂದರ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News