ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಮೃತದೇಹ ಬಾವಿಯಲ್ಲಿ ಪತ್ತೆ

Update: 2024-09-27 11:42 GMT

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೋರ್ವಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕದಲ್ಲಿ ನಡೆದಿದೆ.

ಬೇಡಡ್ಕ ನಿವಾಸಿ ಅಶ್ವತಿ (17) ಮೃತಪಟ್ಟವರು. ಮನೆ ಸಮೀಪದ ಬಾವಿಯಲ್ಲಿ ಗುರುವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈಕೆ ಕುಂಡಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದರು. ಗುರುವಾರ ಬೆಳಗ್ಗೆ ಶಾಲೆಗೆ ತೆರಳಿದ್ದ ಈಕೆ ನಾಪತ್ತೆಯಾಗಿದ್ದು, ಸಂಜೆಯಾದರೂ ಮನೆಗೆ ಬರದೆ ಇದ್ದುದರಿಂದ ಮನೆಯವರು ಬೇಡಡ್ಕ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಮನೆಯವರು ಶೋಧ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕದಳ  ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News