ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ನಿಧನ
Update: 2024-01-10 04:39 GMT
ಕಾಸರಗೋಡು, ಜ.10: ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು ಬೆಳಗ್ಗೆ ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮನೆಯಲ್ಲಿ ಹಠಾತ್ ಕುಸಿದು ಬಿದ್ದ ವಿನೋದ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ.
ಪುಲ್ಲೂರು ನಿವಾಸಿಯಾಗಿದ್ದ ವಿನೋದ್ ಕೆ.ಎಸ್.ಯು. ಮೂಲಕ ಸಕ್ರಿಯ ರಾಜಕೀಯಕ್ಕೆ ಧುಮುಕಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಕಾರ್ಯನಿರ್ವಹಿಸಿದ್ದ ಅವರು, ಬಳಿಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದ ರ್ಶಿಯಾಗಿ ನಿಯೋಜನೆಗೊಂಡಿದ್ದರು.