ಕಾಸರಗೋಡು| ನೀಲೇಶ್ವರ ದೈವಸ್ಥಾನದಲ್ಲಿ ಸುಡುಮದ್ದು ಸ್ಫೋಟ ಪ್ರಕರಣ: ಮೃತರ ಸಂಖ್ಯೆ 2ಕ್ಕೆ ಏರಿಕೆ

Update: 2024-11-03 11:54 GMT

ಕಾಸರಗೋಡು: ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿಯಾಟ ಮಹೋತ್ಸವದ ಸಂದರ್ಭ ಸುಡುಮದ್ದು ಸ್ಫೋಟದಲ್ಲಿ ಬಲಿಯಾದವರ ಸಂಖ್ಯೆ ಎರಡಕ್ಕೇರಿದೆ.

ಗಂಭೀರ ಸ್ಥಿತಿಯಲ್ಲಿ ಕೋಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರತೀಶ್ ( 32) ಎಂಬವರು ರವಿವಾರ ಮೃತಪಟ್ಟಿದ್ದಾರೆ. ಅವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಕರಿಂದಳ ಕಿನಾನೂರಿನ ಸಂದೀಪ್ (38) ಶನಿವಾರ ಸಂಜೆ ಮೃತಪಟ್ಟಿದ್ದಾರೆ.

ಸ್ಫೋಟದಲ್ಲಿ ಒಟ್ಟು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 97 ಮಂದಿ ಈಗಲೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 7 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News