ಕಾಸರಗೋಡು: ಭಾರೀ ಮಳೆ; ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

Update: 2024-07-30 01:56 GMT

ಕಾಸರಗೋಡು:  ಭಾರೀ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಕಾಲೇಜು, ಸ್ಟೇಟ್, ಸಿಬಿ ಎಸ್ ಇ, ಐ ಸಿ ಎಸ್ ಸಿ, ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ,ಮದ್ರಸ ಗಳಿಗೆ ರಜೆ ಅನ್ವಯ ವಾಗಲಿದೆ.

ಪೂರ್ವ ನಿರ್ಧರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ . ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಎಡಬಿಡದೆ ಭಾರೀ ಗಾಳಿ ಮಳೆ ಸುರಿಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News