ಕಾಸರಗೋಡು: ಜು.4ರಂದು ಶಾಲೆಗಳಿಗೆ ರಜೆ

Update: 2023-07-03 17:11 GMT

ಕಾಸರಗೋಡು : ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆ (ಜುಲೈ 4) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.

ಜುಲೈ4 ರಂದು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಭಾರೀ ಮಳೆ ಸಾಧ್ಯತೆ ಇರುವುದರಿಂದ ಎಲ್ಲಾ ಶೈಕ್ಷಣಿಕ ಸಂಸ್ಥೆ ಗಳಿಗೆ ರಜೆ ಘೋಷಿಸಲಾಗಿದೆ.

ಸಿಬಿಎಸ್‌ಇ, ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಗಳು ಇತ್ಯಾದಿಗಳಿಗೆ ರಜೆ ಘೋಷಿಸಲಾಗಿದ್ದು, ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News