ಕಾಸರಗೋಡು: ಮನೆಗೆ ಬೆಂಕಿ ತಗುಲಿ ಅಪಾರ ಹಾನಿ; ಮನೆ ಮಂದಿ ಅಪಾಯದಿಂದ ಪಾರು

Update: 2025-03-20 09:15 IST
ಕಾಸರಗೋಡು: ಮನೆಗೆ ಬೆಂಕಿ ತಗುಲಿ ಅಪಾರ ಹಾನಿ; ಮನೆ ಮಂದಿ ಅಪಾಯದಿಂದ ಪಾರು
  • whatsapp icon

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಬುಧವಾರ ರಾತ್ರಿ ಚೆಂಗಳದಲ್ಲಿ ನಡೆದಿದೆ.

ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ.. 

ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News