ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತ್ಯು

Update: 2023-08-24 11:53 GMT

ಕಾಸರಗೋಡು : ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ.

ಸಿರಿ ಬಾಗಿಲಿನ ಮುಹಮ್ಮದ್ ಸುಬೈರ್ ಎಂಬವರ ಪುತ್ರಿ ಆಯಿಷಾ ಸೆಯಾ (4) ಮೃತ ವಿದ್ಯಾರ್ಥಿನಿ.

ಮನೆ ಸಮೀಪ ಈ ದುರಂತ ನಡೆದಿದೆ. ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯುತ್ತಿದ್ದಾಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ ನಡೆದಿದೆ.

ಸ್ಥಳೀಯರು ಧಾವಿಸಿ ಬಂದು ಕೂಡಲೇ ವಿದ್ಯಾರ್ಥಿನಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.

ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News