ಕಾಸರಗೋಡು | ನದಿಗೆ ಹಾರಿ ಯುವಕ ಆತ್ಮಹತ್ಯೆ

Update: 2025-03-26 12:28 IST
ಕಾಸರಗೋಡು | ನದಿಗೆ ಹಾರಿ ಯುವಕ ಆತ್ಮಹತ್ಯೆ
  • whatsapp icon

ಕಾಸರಗೋಡು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ತಳಂಗರೆ ತೆರುವತ್ ನ ಸೈಯದ್‌ ಝಕರಿಯಾ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಚಂದ್ರ ಗಿರಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕ ನದಿಗೆ ಹಾರಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಶೋಧ ನಡೆಸಿದ್ದಾರೆ. ಬುಧವಾರ ಬೆಳಿಗ್ಗೆ ಚೆಮ್ನಾಡ್ ಸಮೀಪ ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆ ಗೆ ಕೊಂಡೊಯ್ಯಲಾಗಿದ್ದು, ಝಕಾರಿಯ ನಗರದಲ್ಲಿ ಹಣ್ಣು ಹಂಪಲು ಮಾರಾಟ ಮಾಡುತ್ತಿದ್ದರು ಎಂದು ಸಂಬಂಧಿಕರ ತಿಳಿಸಿದ್ದಾರೆ.

ನಗರ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News