ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ಲೋಕಾರ್ಪಣೆ

Update: 2023-12-31 13:39 GMT

ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದಿಂದ ನಿರ್ಮಿಸಲ್ಪಟ್ಟ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ದಿನಾಂಕ ಡಿ. 26ರಂದು ಲೋಕಾರ್ಪಣೆಗೊಳಿಸಿದರು. 

 ಸಿರಿಬಾಗಿಲು ವೆಂಕಪ್ಪಯ್ಯರ ಸ್ಮರಣಾರ್ಥ ಅವರ ಮಗ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರ ಪ್ರಯತ್ನದ ಫಲವಾಗಿ ನಿರ್ಮಿಸಲಾದ ಈ ಕಟ್ಟಡವು ಸುಸಜ್ಜಿತವಾದ ಸಭಾಂಗಣ, ಗ್ರಂಥಾಲಯ, ಮ್ಯೂಸಿಯಂ, ವಿಶ್ರಾಂತಿ ಕೊಠಡಿಗಳನ್ನು ಒಳಗೊಂಡಿದೆ.

ಪ್ರಸ್ತುತ ಕಾರ್ಯಕ್ರಮದಲ್ಲಿ ಏಳು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. 

ಕಾರ್ಯಕ್ರಮದಲ್ಲಿ ಕೊಂಡೆವೂರು ಮಠಾಧೀಶ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಣಿಲ ಧಾಮದ ಮೋಹನದಾಸ ಯತಿ, ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ, ಮುಂಬೈ ಹೇರಂಬ ಇಂಡಸ್ಟ್ರೀಸ್ ಮಾಲಕ ಸದಾಶಿವ ಶೆಟ್ಟಿ ಕೂಳೂರು, ಉದ್ಯಮಿಗಳಾದ ಕೆ.ಕೆ.ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಕಾಶ್ ಮತ್ತಿಹಳ್ಳಿ, ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಕಾಸರಗೋಡು ವಿಧಾನಸಭಾ ಸದಸ್ಯ ಶ್ರೀ ಎನ್.ಎ.ನೆಲ್ಲಿಕ್ಕುನ್ನು, ಮಂಜೇಶ್ವರ ವಿಧಾನಸಭಾ ಸದಸ್ಯ ಶ್ರೀ ಎ.ಕೆ.ಯಂ.ಆಶ್ರಫ್, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಗೋಪಾಲಕೃಷ್ಣ, ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ ಕಲ್ಕೂರ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ಪ್ರತಿಷ್ಠಾನ ಸಂಚಾಲಕ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಕಲಾವಿದ ರಾಧಾಕೃಷ್ಣ ಕಲ್ಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಸ್ವಾಗತ ಸಮಿತಿ ಸಂಚಾಲಕ ಡಾ.ಜಯಪ್ರಕಾಶ ನಾರಾಯಣ ಸರ್ವರನ್ನೂ ಸ್ವಾಗತಿಸಿದರು. ದಾಮೋದರ ಶರ್ಮ ಮತ್ತು ರಾಜಾರಾಮ ರಾವ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಾ.ಶ್ರುತಕೀರ್ತಿರಾಜ, ಯೋಗೀಶ ರಾವ್ ಚಿಗುರುಪಾದೆ ಧನ್ಯವಾದ ಸಲ್ಲಿಸಿದರು.














Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News