ಕಾಸರಗೋಡು: ಸೂಪರ್ ಮಾರ್ಕೆಟ್ ಗೆ ನುಗ್ಗಿದ ಕಾಡು ಹಂದಿ

Update: 2024-12-25 08:56 GMT

ಕಾಸರಗೋಡು: ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿದ ಘಟನೆ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ರ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ನಿನ್ನೆ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್ ಗೆ ನುಗ್ಗಿದೆ.

ಈ ವೇಳೆ ಬೆರಳೆಣಿಕೆಯ‌ ಗ್ರಾಹಕರು ಹಾಗೂ ಕೆಲ ಸಿಬ್ಬಂದಿ  ಮಾತ್ರ ಇದ್ದರೆನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಗ್ರಾಹಕನನ್ನು ಕಂಡು ಗಲಿಬಿಲಿಗೊಂಡ ಸೂಪರ್ ಮಾರ್ಕೆಟ್ ಸಿಬ್ಬಂದಿ‌ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News