ಮಂಜೇಶ್ವರ | ಕಡಿದ ಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು
Update: 2024-12-05 10:22 GMT
ಕಾಸರಗೋಡು: ಮರ ಕಡಿಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮೈಮೇಲೆ ಮರ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಕಡಂಬಾರ್ ಇಡಿಯ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಕಡಂಬಾರ್ ಗಾಂಧಿ ನಗರ ನಿವಾಸಿ ಅಬ್ದುಲ್ ಸತ್ತಾರ್ (44) ಮೃತಪಟ್ಟವರು.
ಇಡಿಯದ ಖಾಸಗಿ ವ್ಯಕ್ತಿಯೊಬ್ಬರ ಹಿತ್ತಿಲಿನಲ್ಲಿ ಮರ ಕಡಿಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮರ ಮೈಮೇಲೆ ಉರುಳಿಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅಬ್ದುಲ್ ಸತ್ತಾರ್ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.