ಮಂಜೇಶ್ವರ : ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

Update: 2025-04-26 11:12 IST
ಮಂಜೇಶ್ವರ : ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ
  • whatsapp icon

ಮಂಜೇಶ್ವರ : ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಎಲ್ಲಾ ಮುಸ್ಲಿಂ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ರಾಷ್ಟ್ರಾದ್ಯಂತ ಭಾರೀ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್ ತಿದ್ದುಪಡಿ ವಿಧೇಯಕವನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ವಕ್ಫ್ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕುಂಜತ್ತೂರಿನಿಂದ ಹೊಸಂಗಡಿ ತನಕ ಶುಕ್ರವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪ್ರತಿಭಟನಾ ಮೆರವಣಿಗೆಗೂ ಮುನ್ನ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಅಮಾನುಷ ಕೃತ್ಯವನ್ನು ಖಂಡಿಸಿ ಹುತಾತ್ಮರಾದವರ ಆತ್ಮಕ್ಕೆ ಶಾಂತಿಗಾಗಿ ಒಂದು ನಿಮಿಷದ ಮೌನ ಪ್ರಾರ್ಥನೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆಗೆ ಮಂಜೇಶ್ವರದ ಬಹುತೇಕ ಮುಸ್ಲಿಂ ಸಂಘಟನೆಗಳ ಮುಖಂಡರು, ರಾಜಕೀಯ ನೇತಾರರು, ಕಾರ್ಯಕರ್ತರು ಸೇರಿದಂತೆ ಸಹಸ್ರಾರು ಮಂದಿ ಭಾಗಿಯಾದರು.

ಪ್ರತಿಭಟನಾ ಮೆರವಣಿಗೆಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿಕೊಂಡು ಶಾಂತವಾದ ರೀತಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ತಡೆಯನ್ನು ಸೃಷ್ಟಿಸದೆ ತಮ್ಮ ವಿರೋಧ ವ್ಯಕ್ತಪಡಿಸಿದರು.

ಪ್ರತಿಭಟನಾ ಮೆರವಣಿಗೆ ಹೊಸಂಗಡಿಯಲ್ಲಿ ಸಮಾಪ್ತಿ ಗೊಂಡಿತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News