ಮಂಜೇಶ್ವರ | ವರ್ಕಾಡಿ ಚರ್ಚ್‌ನಿಂದ ಹೊರೆ ಕಾಣಿಕೆ ಮೆರವಣಿಗೆ

Update: 2025-02-28 10:42 IST

ಮಂಜೇಶ್ವರ : ವರ್ಕಾಡಿ ಸೇಕ್ರೆಡ್ ಹಾರ್ಟ್ ಆಫ್ ಜೀಸಸ್ ಚರ್ಚ್ ನ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ ಮಾ.2 ರಂದು ನಡೆಯಲಿದ್ದು, ಇದರಂಗವಾಗಿ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು.

ವರ್ಕಾಡಿ ಬೇಕರಿ ಜಂಕ್ಷನ್ ನಿಂದ ಚರ್ಚ್ ತನಕ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಚರ್ಚ್ ಧರ್ಮಗುರು ಫಾ.ಬಾಸಿಲ್ ವಾಸ್ ಪ್ರಾರ್ಥನಾ ವಿಧಿ ನೆರವೇರಿಸಿದರು. ವಾರ್ಷಿಕೋತ್ಸವ ಅಂಗವಾಗಿ ಮೂರುದಿನಗಳ ನೊವೇನಾ ಪ್ರಾರ್ಥನೆ ಆಯೋಜಿಸಲಾಗಿತ್ತು.

ಮಾ.2 ರಂದು ಬೆಳಿಗ್ಗೆ ಪವಿತ್ರ ಮೊಂಬತ್ತಿ ವಿತರಣೆ ನಡೆಯಲಿದ್ದು, 10.30ಕ್ಕೆ ನಡೆಯುವ ದಿವ್ಯ ಬಲಿ ಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ರಾದ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿ ಸೋಜ ನೆರವೇರಿಸುವರು. 12.30 ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 5.30 ರಿಂದ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮ ಜರಗಲಿದೆ.

 

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News